ಗುರುಪುರ: ಅಡ್ಡೂರು ಸೆಂಟ್ರಲ್ ಕಮಿಟಿ ವತಿಯಿಂದ ಎಸೆಸೆಲ್ಸಿ, ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಪದವಿ ಮತ್ತು ವೃತ್ತಿಪರ ಕೋರ್ಸ್ ಗಳ ಬಗ್ಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಇತ್ತೀಚಿಗೆ ಅಡ್ಡೂರು ಕಮ್ಯೂನಿಟಿ ಸೆಂಟರ್ ನಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾದ ಹನೀಫ್ ಪುತ್ತೂರು ಹಾಗೂ ರಫೀಕ್ ಮಾಸ್ಟರ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸ್ಕಾಲರ್ ಶಿಫ್ ಬಗ್ಗೆ ನಝೀರ್ ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಭಾಗವಹಿಸಿದ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಫ್, ವೃತ್ತಿಪರ ಕೋರ್ಸ್, ಸ್ಪರ್ಧಾತ್ಮಕ ಪರೀಕ್ಷೆಗೆ ನೆರವು ನೀಡುವುದಾಗಿ ಅಡ್ಡೂರು ಸೆಂಟ್ರಲ್ ಕಮಿಟಿ ನಿರ್ಧರಿಸಿತು.
ಈ ಸಂದರ್ಭ ಅಡ್ಡೂರು ಸೆಂಟ್ರಲ್ ಕಮಿಟಿ ಪದಾಧಿಕಾರಿಗಳಾದ ಮೊಹಮ್ಮದ್ ಇಬ್ರಾಹೀಂ ಅಳಕೆ, ಅಬ್ದುಲ್ ಖಾದರ್, ಪುತ್ತೂರು ಕಮ್ಯೂನಿಟಿ ಸೆಂಟರ್ ನ ಇಮ್ತಿಯಾಝ್ ಪುತ್ತೂರು ಉಪಸ್ಥಿತರಿದ್ದರು.