ದೆಹಲಿ: ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ 2 ರೂಪಾಯಿ ಕಡಿತಗೊಳಿಸಿ ಆದೇಶಿಸಿದೆ.
ಸರ್ಕಾರಿ ಸ್ವಾಮ್ಯ ತೈಲ ಕಂಪನಿಗಳ ಮೂಲಕ ಪೂರೈಕೆಯಾಗುವ ಪೆಟ್ರೋಲ್-ಡೀಸೆಲ್ ಬೆಲೆ ಮೇಲೆ ಲೀಟರ್‌ಗೆ 2 ರೂ. ಇಳಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಇಂದು ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಇಂಧನ ಸಚಿವಾಲಯ ತಿಳಿಸಿದೆ.
ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನದ ಉಡುಗೊರೆಯಾಗಿ ಸಬ್ಸಿಡಿ ರಹಿತ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು.