Friday, April 18, 2025

ಕರ್ನಾಟಕ ವಿಧಾನಸಭೆ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

by eesamachara
0 comment

ಬೆಂಗಳೂರು: ರಾಜ್ಯವಿಧಾನಸಭೆ ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರವರೆಗೂ ನಾಮಪತ್ರ ಸಲ್ಲಿಸಬಹುದಾಗಿದೆ.

ಎ.14ರಂದು ಅಂಬೇಡ್ಕರ್ ಜಯಂತಿ ಮತ್ತು 16 ರಂದು ರವಿವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆಗೆ ಏಳು ದಿನಗಳಲ್ಲಿ ಎರಡು ದಿನ ಸರ್ಕಾರಿ ರಜೆ ಇರಲಿದ್ದು, ಐದು ದಿನಗಳು ಮಾತ್ರ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶ ಇದೆ. ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಇನ್ನು ಇದೇ ಮೊದಲ ಬಾರಿಗೆ ಆನ್ ಲೈನ್ ಮೂಲಕ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಚುನಾವಣೆ ಆಯೋಗದ ವೆಬ್ಸೈಟ್ನಲ್ಲಿ ಎಲ್ಲಾ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಎ.21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದ್ದು, ಎ.24ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.

ಚುನಾವಣಾಧಿಕಾರಿಗಳ ಅನುಮತಿ ಪಡೆದುಕೊಂಡು ದೊಡ್ಡ ಮಟ್ಟದಲ್ಲಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆಗೆ ಆಗಮಿಸಬಹುದು. ಆದರೆ, ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಿಸಲು ಅವಕಾಶ ನೀಡಲಾಗಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios