ಮಂಗಳೂರು: ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಅವರ ಸೂಚನೆ ಮೇರೆಗೆ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಸ್ವರೂಪ.ಎನ್ ಶೆಟ್ಟಿ ಹಾಗೂ ಗೀತಾ ಅತ್ತಾವರ ಅವರನ್ನು ನೇಮಿಸಿ ರಾಜ್ಯಾಧ್ಯಕ್ಷೆ ಪುಷ್ಪ ಅಮರ್ ನಾಥ್ ಆದೇಶ ಮಾಡಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರ ನೇತೃತ್ವದಲ್ಲಿ, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯರವರು ಮತ್ತು ಮಾನ್ಯ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ರವರು ಹಾಗೂ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರುವ ಹಾಗೂ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಈ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.