ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯನ್ನಾಗಿ ಯು.ಪಿ. ಇಬ್ರಾಹೀಂ ಅವರನ್ನು ನೇಮಿಸಿ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಹಾಗೂ ದ.ಕ. ಜಿಲ್ಲಾ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಬಿ.ರಮಾನಾಥ ರೈ ಆದೇಶಿಸಿದ್ದಾರೆ.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡರಾಗಿರುವ ಯು.ಪಿ. ಇಬ್ರಾಹೀಂ ಅವರು ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿ.ಪಂ ಕೃಷಿ ಮತ್ತು ಕೈಗಾರಿಕಾ ಸಮಿತಿಯ ಅಧ್ಯಕ್ಷರಾಗಿ ಸೇವೆಸಲ್ಲಿದ್ದು, ಪಕ್ಷದಲ್ಲಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಪ್ರಸ್ತುತ ಅವರು ಗುರುಪುರ ಕ್ಷೇತ್ರದ ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.