ಬೆಂಗಳೂರು: ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ, ಮಾಜಿ ಸಚಿವ ಹಾಗೂ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಅವರು ನಿವೃತ್ತಿ ಘೋಷಿಸಿದ್ದಾರೆ.
“ನಾನು ಸ್ವ–ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ಈಶ್ವರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.