ನವದೆಹಲಿ: ಹೊಸ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ
ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲು ಜೂನ್ 1ರವರೆಗೂ ಜಾಮೀನು ನೀಡಿದೆ.
ಜೂನ್ 1ರಂದು ಲೋಕಸಭೆ ಚುನಾವಣೆಯ ಕೊನೆಯ ಹಾಗೂ 7ನೇ ಹಂತದ ಚುನಾವಣೆ ನಡೆಯಲಿದ್ದು, ಅಲ್ಲಿಯವರೆಗೂ ಕೇಜ್ರಿವಾಲ್ ಅವರು ಚುನಾವಣೆಗೆ ಸಂಬಂಧಿಸಿದ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು. ಆದರೆ ಅರವಿಂದ್ ಕೇಜ್ರಿವಾಲ್ ಅವರು ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ. ಜೂನ್ 2ರಂದು ಅವರು ಜೈಲಿನ ಅಧಿಕಾರಿಗಳ ಮುಂದೆ ಶರಣಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.