ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರು ಮತ್ತು ಸಂಸ್ಥೆಗಳನ್ನು ಗುರುತಿಸಿ 2023ನೇ ಸಾಲಿನ “ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ” ಪಟ್ಟಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಇಂದು ಪ್ರಕಟಿಸಿದ್ದಾರೆ.
ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರು ನಿವಾಸಿ ಅಂಬಿಗ ಅಬ್ದುಲ್ ಕರೀಂ ಬ್ಯಾರಿ ಸಹಿತ 46 ಮಂದಿ ಹಾಗೂ 17 ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಲಾಗಿದ್ದು, ನಾಳೆ (ನ.1) ನೆಹರೂ ಮೈದಾನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಪ್ರಶಸ್ತಿ ನೀಡಿ ಗೌರವಿಸಲಿದೆ.