ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ನ.15ರಂದು ಬೆಳಿಗ್ಗೆ 10:30ಕ್ಕೆ ನಗರದ ಪುರಭವನದಲ್ಲಿ ನಡೆಯಲಿರುವ ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶ ಮತ್ತು ಸಂವಾದ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಕರೆ ನೀಡಿದ್ದಾರೆ.
ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಮಾಜಿ ಸಭಾಪತಿ ಮಾನ್ಯ ವಿ.ಸುದರ್ಶನ್ ಅವರು “ಪಂಚಾಯತ್ ರಾಜ್ ಅಧಿನಿಯಮ” ಕುರಿತು ಸಂಕ್ಷಿಪ್ತ ಪರಿಚಯ ನೀಡಲಿರುವರು. ಸಭೆಯಲ್ಲಿ ಶಾಸಕುರು, ಮಾಜಿ ಸಚಿವರು, ಮಾಜಿ ಶಾಸಕರು, ಉಪಸ್ಥಿತಲಿರುವರು.
ಪಂಚಾಯತ್ ರಾಜ್ ಇಲಾಖೆಯ ಕುಂದುಕೊರತೆಗಳ ಬಗ್ಗೆ ವಿಚಾರ ಮಂಡಿಸಲು ವಿಧಾನಸಭಾ ಕ್ಷೇತ್ರದ ತಲಾ ಓರ್ವ ಗ್ರಾ.ಪಂ. ಪ್ರತಿನಿಧಿಗೆ ಅವಕಾಶ ನೀಡಲಾಗಿದ್ದು, ಇದೊಂದು ಜಿಲ್ಲೆಯಲ್ಲಿ ನೆಡಯುವ ಪ್ರಪ್ರಥಮ ಐತಿಹಾಸಿಕ ಕಾರ್ಯಕ್ರಮವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬ್ಲಾಕ್ ವ್ಯಾಪ್ತಿಯ ಮಾಜಿ ಜಿ.ಪಂ. ಸದಸ್ಯರು, ಗ್ರಾ.ಪಂ. ಪಂಚಾಯತ್ ಸದಸ್ಯರು, ಮಾಜಿ ಗ್ರಾ.ಪಂ. ಸದಸ್ಯರು, ಪರಾಜಿತ ಅಭ್ಯರ್ಥಿಗಳು ಸದುಪಯೋಗಪಡಿಸಬೇಕು ಹಾಗೂ ಎಲ್ಲಾ ನಾಯಕರು, ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಲು ಹರೀಶ್ ಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.