ಬೆಂಗಳೂರು: ಮುಂಬರುವ ರಾಜ್ಯ ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಪರ ಒಲವು ಹೆಚ್ಚಾಗಿದ್ದು, ಶಿಕ್ಷಕರು ಬೆಂಬಲ ಸೂಚಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಬಾರಿ ಚುನಾವಣೆಯಲ್ಲಿ ಸಣ್ಣ ಪ್ರಮಾಣದ ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಬೋಜೇಗೌಡ ವಿರುದ್ಧ ಸೋಲು ಕಂಡ ಮಂಜುನಾಥ್ ಅವರಿಗೆ ಈ ಬಾರಿ ಕಾಂಗ್ರೆಸ್ ಮತ್ತೆ ಅವಕಾಶ ನೀಡಿದೆ. ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಮಂಜುನಾಥ್ ನಿರಂತರ ಶಿಕ್ಷಕರ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದು, ಅವರ ಸಮಸ್ಯೆಗಳ ಬಗ್ಗೆ ಅರಿವು ಹೊಂದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಶಿಕ್ಷಕರ ಸಮಸ್ಯೆಗಳಿಗೆ ಮಂಜುನಾಥ್ ಮೂಲಕ ಪರಿಹಾರ ಸಿಗಲಿದೆ ಎಂದು ಶಿಕ್ಷಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿಕ್ಷಕರ ಪಿಂಚಣಿ ಸಮಸ್ಯೆ, ಉಪನ್ಯಾಸಕರ ಹುದ್ದೆ ಭರ್ತಿ, ಖಾಸಗಿ ಶಿಕ್ಷಕರಿಗೆ ಸೇವಾ ಭದ್ರತೆ ಸೇರಿದಂತೆ ವಿವಿಧ ಸಮಸ್ಯೆಗಳು ಪರಿಹರಿಸುವ ಭರವಸೆ ಮಂಜುನಾಥ್ ಮೇಲೆ ಮೂಡಿದ್ದರಿಂದ ಶಿಕ್ಷಕರ ಬೆಂಬಲ ಹೆಚ್ಚಾಗಲು ಕಾರಣ ಎನ್ನಲಾಗುತ್ತಿದ್ದು, ಈ ಬಾರಿ ಮಂಜುನಾಥ್ ಗೆಲುವಿಗೆ ಹೆಚ್ಚಿನ ಅವಕಾಶವಿದೆ ಎಂದು ಹೇಳಲಾಗುತ್ತಿದೆ.