ಪುತ್ತೂರು: ಇತ್ತೀಚಿಗೆ ನಿಧನರಾದ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಜೂ.30 ರಂದು ‘ನುಡಿನಮನ’ ಕಾರ್ಯಕ್ರಮವನ್ನು ತಾಲೂಕಿನ ಮಾಯ್ ದೇ ದೇವುಸ್ ಚರ್ಚ್ ಹಾಲ್ ನಲ್ಲಿ ಆಯೋಜಿಸಲಾಗಿದೆ.
ಪ್ರಕಾಶ್ ಅವರ ಸ್ಮರಣಾರ್ಥವಾಗಿ ಕಾರ್ಯಕ್ರಮದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಹಾಗೂ ಎ.ಜೆ. ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್ ಸಹಯೋಗದಲ್ಲಿ ಸಾರ್ವಜನಿಕ ಉಚಿತ ಹೃದ್ರೋಗ ಪರೀಕ್ಷಾ ಶಿಬಿರ, ಆರೋಗ್ಯ ತಪಾಸಣಾ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಪೂರ್ಣೇಶ್ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

