Thursday, June 5, 2025

ಪ್ರಜಾಪ್ರಭುತ್ವ ಉಳಿವಿಗೆ BJP ಸೋಲಿಸುವುದು ಅಗತ್ಯ: ಮುಖ್ಯಮಂತ್ರಿ ಚಂದ್ರು

by eesamachara
0 comment

ಕಾರವಾರ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರಜಾಪ್ರಭುತ್ವದ ಉಳಿವಿಗೆ ಬಿಜೆಪಿ ಸೋಲಿಸುವುದು ಅಗತ್ಯ. ಹಾಗಾಗಿ ಬಿಜೆಪಿ ಸೋಲಿಸಲು ನಮ್ಮ ಪಕ್ಷವು (ಆಪ್) ‘ಇಂಡಿಯಾ’ ಒಕ್ಕೂಟಕ್ಕೆ ಬೆಂಬಲಿಸುತ್ತಿದೆ ಎಂದು ಆಮ್ ಆದ್ಮ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಸುತ್ತಾ ಬಂದಿದೆ. ಇದನ್ನೇ ಮುಂದಿಟ್ಟು ಅದು ಚುನಾವಣೆ ಎದುರಿಸುತ್ತಿದೆ. ಬಿಜೆಪಿ ಅಭಿವೃದ್ಧಿಯ ಬದಲು ಕೋಮುವಾದಕ್ಕೆ ಆದ್ಯತೆ ನೀಡುತ್ತಿದ್ದು, ಹಿಟ್ಲರ್ ಗಿಂತ ಕೆಟ್ಟ ಸರ್ವಾಧಿಕಾರಿ ಆಡಳಿತ ನೀಡಿದೆ ಎಂದು ಕಿಡಿಕಾರಿದರು.

ಬಿಜೆಪಿ ನಾಯಕರು ವಿಶ್ವಗುರುವಾಗುವ ಮುನ್ನ ವಿಶ್ವ ಮಾನವರಾಗಬೇಕಿದೆ. ಚುನಾವಣಾ ಆಯೋಗದಿಂದ ಮುಖ್ಯ ನ್ಯಾಯಮೂರ್ತಿ ಅವರನ್ನು ಹೊರಗಿಡಲು ಕಾಯ್ದೆ ತಂದ ಬಿಜೆಪಿ ವಾಮಮಾರ್ಗದ ಮೂಲಕ ಗೆಲ್ಲಲು ಪ್ರಯತ್ನಿಸುತ್ತಿದೆ ಎಂದರು.

ಉದ್ಯಮಿಗಳು, ಭ್ರಷ್ಟಾಚಾರಿಗಳನ್ನು ಜಾರಿ ನಿರ್ದೇಶನಾಲಯದ ಮೂಲಕ ಬೆದರಿಸಿ ಚುನಾವಣೆ ಬಾಂಡ್ ಖರೀದಿಸುವಂತೆ ಒತ್ತಡ ಹೇರಿದೆ. ಅಲ್ಲದೆ, ರೈತರ ಸಾಲಮನ್ನಾ ಮಾಡದೆ, ಬಡ್ಡಿ ರಿಯಾಯಿತಿಯೂ ಕೊಡದ ಸರ್ಕಾರ ಉದ್ಯಮಿಗಳ ಹತ್ತಾರು ಲಕ್ಷ ಕೋಟಿ ಸಾಲಮನ್ನಾ ಮಾಡಿರುವುದು ನಾಚಿಕೆಗೇಡು ಎಂದ ಆಕ್ರೋಶ ವ್ಯಕ್ತಪಡಿಸಿದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios