ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ದಾರಿ ತಪ್ಪುತ್ತಿದೆ ಎಂದು ಆರೋಪಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ನಿಯೋಗ ಗುರುವಾರ ರಾಜಭವನದಲ್ಲಿ ರಾಜ್ಯಪಾಲರಿಗೆ ದೂರು ನೀಡಿದೆ.
ಪೆನ್ ಡ್ರೈವ್ ಪ್ರಕರಣದಲ್ಲಿ ಪಾರದರ್ಶಕ ತನಿಖೆ ಆಗಬೇಕು. ಜೊತೆಗೆ ಪೆನ್‍ಡ್ರೈವ್ ಪ್ರಕರಣ ಸಂಬಂಧ ಕಳೆದ ಒಂದು ವಾರದಿಂದ ಆದ ಬೆಳವಣಿಗೆಗಳ ಬಗ್ಗೆ ಕುಮಾರಸ್ವಾಮಿ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.