Monday, December 23, 2024

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ: ಕುಮಾರಸ್ವಾಮಿ ವಿರುದ್ಧ SITಗೆ ಕಾಂಗ್ರೆಸ್ ದೂರು

by eesamachara
0 comment

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಬೆದರಿಕೆ ಹಾಕಿ ತನಿಖೆಯನ್ನು ದಿಕ್ಕು ತಪ್ಪಿಸಿದ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮುಖಂಡರು ಗುರುವಾರ ವಿಶೇಷ ತನಿಖಾ ತಂಡಕ್ಕೆ ದೂರು ಸಲ್ಲಿಸಿದ್ದಾರೆ.

“ಮಾಜಿ ಸಚಿವ ಹೆಚ್​​ಡಿ ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹಲವು ಮಹಿಳೆಯರು ಸಂತ್ರಸ್ತೆಯರಾಗಿದ್ದಾರೆ. ಈ ಪ್ರಕರಣಗಳ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿದೆ. ಹೀಗಿರುವಾಗ, ಕುಮಾರಸ್ವಾಮಿ ಸಂತ್ರಸ್ತೆಯರ ಸ್ಥಳವನ್ನು ಬಹಿರಂಗಪಡಿಸುತ್ತಿದ್ದಾರೆ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಜನರನ್ನು ಪರೋಕ್ಷವಾಗಿ ರಕ್ಷಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಮುಖಂಡರು ದೂರಿನಲ್ಲಿ ಆಗ್ರಹಿಸಿದ್ದಾರೆ.

“ಕುಮಾರಸ್ವಾಮಿ ಮತ್ತು ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಸಂತ್ರಸ್ತ ಮಹಿಳೆಯರಿಗಾಗಿ ಧ್ವನಿ ಎತ್ತುತ್ತಿಲ್ಲ. ಆದರೆ ಪೆನ್ ಡ್ರೈವ್ ಅನ್ನು ಪ್ರಸಾರ ಮಾಡುವವರತ್ತ ಗಮನ ಹರಿಸುವ ಮೂಲಕ ತನಿಖೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಸಂತ್ರಸ್ತೆಯರು ದೂರು ನೀಡಲು ಮುಂದೆ ಬರುತ್ತಿಲ್ಲ. ಈ ಪ್ರಕರಣದ ಕುರಿತು ಹೆಚ್ಚಿನ ವಿವರಗಳು ಕುಮಾರಸ್ವಾಮಿಯವರ ಬಳಿ ಇವೆ. ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಎಸ್​​ಐಟಿಯನ್ನು ಒತ್ತಾಯಿಸಿದ್ದಾರೆ” ಎಂದು ಆರೋಪಿಸಲಾಗಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios