Monday, December 23, 2024

ಬಿಜೆಪಿ ತೊರೆದ ರಾಧಕೃಷ್ಣ ಬೊಳ್ಳೂರು ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ 

by eesamachara
0 comment

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ  ಬಿಜೆಪಿ ಮಾಜಿ ರೈತ ಮೋರ್ಚ ಜಿಲ್ಲಾಧ್ಯಕ್ಷ ರಾಧಕೃಷ್ಣ ಬೊಳ್ಳೂರು ಅಧಿಕೃತವಾಗಿ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ನಿರ್ದೇಶನದಲ್ಲಿ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಬರಮಾಡಿಕೊಂಡರು. ಇದೇ ವೇಳೆ ಬಿಜೆಪಿ ಮಾಜಿ ಗ್ರಾಮ ಸಮಿತಿ ಅಧ್ಯಕ್ಷ ಸತ್ಯ ಪ್ರಸಾದ್  ಪುಳಿಮಾರಡ್ಕ, ಸಹಕಾರಿ ಸಂಘದ ಮಾಜಿ ನಿರ್ದೇಶಕ ಡಿ.ಕೆ.ಸುರೇಶ್ ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಂ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ, ವೆಂಕಪ್ಪ ಗೌಡ, ಶಾಹುಲ್ ಹಮೀದ್, ಪ್ರವೀಣ್ ಚಂದ್ರ ಆಳ್ವ, ಪಿ.ಎಸ್ ಗಂಗಾಧರ್ ಗೌಡ, ಸದಾನಂದ ಮಾವಾಜಿ, ಸುರೇಶ್ ಎಂ.ಎಚ್., ಇಟ್ಟಿಗುಂಡಿ ವೆಂಕಠರಮಣ, ಶಶಿಧರ .ಜೆ, ಕೆ.ಎಂ. ಮುಸ್ತಫಾ, ಜಯಪ್ರಕಾಶ್ ನೆಕ್ರಪ್ಪಾಡಿ, ಸತ್ಯಕುಮಾರ್ ಅಡಿಂಜ, ಜಯರಾಮ ಬೊಳ್ಳಾಜೆ,  ಭವಾನಿ ಶಂಕರ್ ಕಲ್ಮಡ್ಕ, ರವಿ ಪೂಜಾರಿ, ಚೇತನ್, ಪವನ್ ಮುಂಡ್ರಾಜೆ ಮತ್ತಿತರರು ಉಪಸ್ಥಿತರಿದ್ದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios