ಬೆಂಗಳೂರು: ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಮೈಸೂರಿನಿಂದ ಯದುವೀರ್ ಒಡೆಯರ್, ಬೆಂಗಳೂರು ಗ್ರಾಮಾಂತರದಿಂದ ಡಾ. ಮಂಜುನಾಥ್, ಹಾವೇರಿಯಿಂದ ಮಾಜಿ ಸಿಎಂ ಬೊಮ್ಮಾಯಿ, ಉಡುಪಿ-ಚಿಕ್ಕಮಗಳೂರುಯಿಂದ ಕೋಟಾ ಶ್ರೀನಿವಾಸ್ ಪೂಜಾರಿ, ಬೆಂಗಳೂರು ಉತ್ತರದಿಂದ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಲಾಗಿದೆ.
ಇನ್ನೂ ಮೈಸೂರು ಸಂಸದ ಪ್ರತಾಪ್ ಸಿಂಹ, ಬೆಂಗಳೂರು ಉತ್ತರ ಸಂಸದ ಡಿ.ವಿ ಸದಾನಂದ ಗೌಡ, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಹಾವೇರಿ ಸಂಸದ ಶಿವಕುಮಾರ್ ಉದಾಸಿ, ತುಮಕೂರು ಸಂಸದ ಜಿಎಸ್ ಬಸವರಾಜು, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್, ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಇಲ್ಲಿ ಹೊಸ ಮುಖ ಹಾಗೂ ರಾಜ್ಯ ಘಟಕದ ಹಿರಿಯ ನಾಯಕರಿಗೆ ಮಣೆ ಹಾಕಲಾಗಿದೆ.
2ನೇ ಪಟ್ಟಿ ಹೀಗಿದೆ:
►ಮೈಸೂರು – ಯದುವೀರ್ ಕೃಷ್ಣದತ್ತ ಒಡೆಯರ್
►ಚಾಮರಾಜನಗರ – ಎಸ್.ಬಾಲರಾಜ್
►ಬೆಂಗಳೂರು ಗ್ರಾಮಾಂತರ- ಸಿಎನ್ ಮಂಜುನಾಥ
►ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ
►ಬೆಂಗಳೂರು ಕೇಂದ್ರ – ಪಿಸಿ ಮೋಹನ್
►ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ
►ಬಾಗಲಕೋಟೆ: ಗದ್ದಿಗೌಡರ್
►ಬಿಜಾಪುರ – ರಮೇಶ್ ಜಿಗಜಿಣಗಿ
►ಕಲಬುರಗಿ – ಉಮೇಶ್ ಜಾಧವ್
►ಬೀದರ್ – ಭಗವಂತ ಖೂಬಾ
►ಕೊಪ್ಪಳ: ಬಸವರಾಜ್ ಕ್ಯಾವತೂರು
►ಬಳ್ಳಾರಿ- ಶ್ರೀರಾಮುಲು
►ಹಾವೇರಿ- ಬಸವರಾಜ ಬೊಮ್ಮಾಯಿ
►ಧಾರವಾಡ – ಪ್ರಹ್ಲಾದ್ ಜೋಷಿ
►ದಾವಣಗೆರೆ – ಗಾಯತ್ರಿ ಸಿದ್ದೇಶ್ವರ
►ಶಿವಮೊಗ್ಗ – ಬಿವೈ ರಾಘವೇಂದ್ರ
►ಉಡುಪಿ ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
►ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟ
►ತುಮಕೂರು – ಸೋಮಣ್ಣ