ಬೆಂಗಳೂರು: ನಿಗಮ-ಮಂಡಳಿ ಪಟ್ಟಿ ಫೈನಲ್ ಮಾಡುವ ಸಂಬಂಧ ನಾಳೆ (ನ.27) ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Surjewala) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಮಧ್ಯಾಹ್ನ 12:20 ಕ್ಕೆ ಬೆಂಗಳೂರಿಗೆ (Bengaluru) ಆಗಮಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜೊತೆ ನಿಗಮ-ಮಂಡಳಿ ಕುರಿತು ಸಭೆ ನಡೆಸಲಿದ್ದಾರೆ ಎನ್ನಲಾಗಿದ್ದು, ಬಹುತೇಕ ನಾಳೆಯೇ ನಿಗಮ-ಮಂಡಳಿ ಪಟ್ಟಿ ಫೈನಲ್ ಆಗುವ ಸಾಧ್ಯತೆ ಇದೆ.
ಈಗಾಗಲೇ ಮೊದಲ ಹಂತದ ಸಭೆಯನ್ನು ಸಿಎಂ, ಡಿಸಿಎಂ, ಸುರ್ಜೇವಾಲಾ ನಡೆಸಿದ್ದಾರೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದು, ಶಾಸಕರಿಗೆ ಮೊದಲ ಪಟ್ಟಿಯಲ್ಲಿ ಅವಕಾಶ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶಾಸಕರ ಜೊತೆ ಕಾರ್ಯಕರ್ತರಿಗೂ ನೀಡುವ ಬಗ್ಗೆ ಚರ್ಚೆ ಆಗಲಿದೆ. ನಾಳೆ ಮಹತ್ವದ ಸಭೆ ನಡೆಯಲಿದ್ದು,ಯಾರು ಯಾರಿಗೆ ನಿಗಮ-ಮಂಡಳಿ ಎನ್ನುವುದು ಬಹುತೇಕ ಫೈನಲ್ ಆಗುವ ಸಾಧ್ಯತೆಯಿದೆ.