ಬೆಂಗಳೂರು: ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ.
ಕಮಲಾ ಹಂಪನಾ ಅವರು ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡಿದ್ದಾರೆ.
ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10 ರಿಂದ ರವೀಂದ್ರ ಕಲಾಕ್ಷೇತ್ರದ ಹಿಂಭಾಗದಲ್ಲಿರುವ ಸಂಸ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರ ದೇಹವನ್ನು ರಾಮಯ್ಯ ಆಸ್ಪತ್ರೆಗೆ ದಾನ ಮಾಡಿದ್ದಾರೆ.
ಮೃತರು ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಅವರನ್ನು ಅಗಲಿದ್ದಾರೆ.