ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಹಿರಿಯ ಮುಖಂಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ (79) ಬುಧವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಇತ್ತೀಚೆಗೆ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಗುರುವಾರ ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಸಂತ ಬಂಗೇರ ಅವರು ಐದು ಬಾರಿ ಶಾಸಕರಾಗಿ ಸೇವೆಸಲ್ಲಿಸಿದ್ದಾರೆ.