ಮಂಗಳೂರು: ಲೋಕಸಭಾ ಚುನಾವಣೆಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಉಸ್ತುವಾರಿಯನ್ನಾಗಿ ನವೀನ್ ಆರ್.ಡಿಸೋಜಾ ಅವರನ್ನು ನೇಮಿಸಿ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಹಾಗೂ ದ.ಕ. ಜಿಲ್ಲಾ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಬಿ.ರಮಾನಾಥ ರೈ ಆದೇಶಿಸಿದ್ದಾರೆ.
4 ಬಾರಿ ಮ.ನ.ಪಾ ಸದಸ್ಯರಾಗಿ ಚುನಾಯಿತರಾಗಿರುವ ನವೀನ್ ಆರ್.ಡಿಸೋಜಾ ಅವರು ಈ ಹಿಂದೆ ಕೆಪಿಸಿಸಿ ಕಾರ್ಯದರ್ಶಿಯಾಗಿ, ಕೆಪಿಸಿಸಿ ಸಂಯೋಜಕರಾಗಿ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.