ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆದೇಶದಂತೆ ಫೆ. 17.02.2024 ರಂದು ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಮುಂಭಾಗದ ಕ್ರೀಡಾಂಗಣದಲ್ಲಿ “ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ” ವನ್ನು ಹಮ್ಮಿಕೊಳ್ಳಲಾಗಿದೆ.
ಸಮಾವೇಶದಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಎಐಸಿಸಿ ಕಾರ್ಯದರ್ಶಿಗಳು, ರಾಜ್ಯದ ಎಲ್ಲಾ ಸಚಿವರು, ಸಂಸದರು, ಶಾಸಕರು, ಕೆಪಿಸಿಸಿ ಕಾಯಾಧ್ಯಕ್ಷರು ಹಾಗೂ ಪಕ್ಷದ ಹಿರಿಯ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.