ಮಂಗಳೂರು: ಗ್ಯಾಸ್ ಸಿಲಿಂಡರ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ-ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಾ.9 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಸಂಜೆ 4 ಗಂಟೆಗೆ ಮಂಗಳೂರು ಮಿನಿವಿಧಾನ ಸೌಧದ ಎದುರು ನಡೆಯಲಿರುವ ಪ್ರತಿಭಟನೆಯ ನೇತೃತ್ವವನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಹಿಸಲಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಸಿಲಿಂಡರ್ ಬೆಲೆ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಜನ ಸಾಮಾನ್ಯರ ಕೈಗೆಟುಕದಂತಾಗಿವೆ. ಜನರು ಸಂಕಷ್ಟಕ್ಕೀಡಾಗಿದ್ದಾರೆ. ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ. ಲೂಟಿ ಹೊಡೆಯೋದೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾಯಕವಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.