ಮಡಿಕೇರಿ: ಸೋಮವಾರ ಪೇಟೆ ತಾಲೂಕಿನ ಸೂರ್ಲಬ್ಬಿಯ ಮುಟ್ಲಗಿ ಗ್ರಾಮದಲ್ಲಿ SSLC ಪಾಸಾದ ವಿದ್ಯಾರ್ಥಿನಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ (32) ನನ್ನು ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸಲಾಗುತ್ತಿತ್ತು. ಗ್ರಾಮದ ಸಮೀಪ ಕಾಡಿನಲ್ಲಿ ಆರೋಪಿ ಅವಿತುಕೊಂಡಿರುವ ಕುರಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಬೆಳಿಗ್ಗೆ ಕೂಡಲೇ ಆತನನ್ನು ಬಂಧಿಸಲಾಯಿತು. ಇನ್ನು ಬಾಲಕಿಯ ರುಂಡದ ಕುರಿತು ಇನ್ನಷ್ಟೇ ತನಿಖೆ ನಡೆಸಬೇಕಿದೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ. ಇನ್ನೂ ಬಾಲಕಿಯ ರುಂಡ ಇನ್ನೂ ಪತ್ತೆಯಾಗಿಲ್ಲ ಎಂದು ಮಡಿಕೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ.
ಆರೋಪಿ ಆತ್ಮಹತ್ಯೆ ಮಾಡಿರುವುದಾಗಿ ಗ್ರಾಮದಲ್ಲಿ ನಿನ್ನೆ ಸುದ್ದಿಯಾಗಿತ್ತು. ಈ ಬಗ್ಗೆ ಹಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು.