231
ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ದಿವಂಗತ ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
4 ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕರ ಹಠಾತ್ ನಿಧನದಿಂದ ತೆರವಾದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ.7ರಂದು ಉಪಚುನಾವಣೆ ನಡೆಯಲಿದೆ. ರಾಜಾ ವೇಣುಗೋಪಾಲ ನಾಯಕ ಅವರಿಗೆ ಕಳೆದ 20 ವರ್ಷಗಳಿಂದ ತಂದೆಯವರ ಚುನಾವಣೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವವಿದೆ.