Monday, December 23, 2024

‘ಮೋದಿ‘ ಉಪನಾಮಕ್ಕೆ ಮಾನನಷ್ಟ ಪ್ರಕರಣ: ರಾಹುಲ್ ಗಾಂಧಿಗೆ  30 ದಿನಗಳ ಜಾಮೀನು ಮಂಜೂರು

by eesamachara
0 comment

ಗಾಂಧಿನಗರ: ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂರತ್‌ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ‘ಮೋದಿ‘ ಎಂಬ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರಾತ್ ನ ಸೂರತ್‌ ಕೋರ್ಟ್‌ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್‌ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್‌ ಕೋರ್ಟ್‌ 30 ದಿನಗಳ ಜಾಮೀನು ಮಂಜೂರು ಮಾಡಿದ್ದು ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

2019ರ ಲೋಕಸಭೆ ಚುನಾವಣೆಗಾಗಿ ಕೋಲಾರದಲ್ಲಿ ಮಾಡಿದ ಪ್ರಚಾರ ಭಾಷಣದಲ್ಲಿ ರಾಹುಲ್ ಅವರು, ‘ಅದು ಹೇಗೆ ಕಳ್ಳರ ಹೆಸರಿನಲ್ಲಿ ಸಾಮಾನ್ಯವಾಗಿ ‘ಮೋದಿ‘ ಎಂಬ ಉಪನಾಮ ಕಂಡುಬರುತ್ತದೆ‘ ಎಂದಿದ್ದರು. ಈ ಹೇಳಿಕೆಗೆ ಸಂಬಂಧಿಸಿ ಅಂದು ಗುಜರಾತ್ ಸಚಿವರಾಗಿದ್ದ ಪೂರ್ಣೇಶ್ ಮೋದಿ ಎಂಬವರು ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಅಂತಿಮ ವಿಚಾರಣೆ ನಡೆಸಿ ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ಮಾರ್ಚ್ 23ರಂದು ತೀರ್ಪು ಕಾಯ್ದಿರಿಸಿತ್ತು. ರಾಹುಲ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

‘ಮೋದಿ‘ ಎಂಬ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ವರಿಷ್ಠರೊಬ್ಬರು ರಾಹುಲ್ ಗಾಂಧಿ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios