Wednesday, April 16, 2025

‘ಮೋದಿ ಹಟಾವೋ ದೇಶ್ ಬಚಾವೋ’ ಪೋಸ್ಟರ್: 6 ಮಂದಿ ಅರೆಸ್ಟ್, 100ಕ್ಕೂ ಅಧಿಕ ಎಫ್ಐಆರ್

by eesamachara
0 comment

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರ 6 ಮಂದಿಯನ್ನು ಬಂಧಿಸಿದ್ದು, 100ಕ್ಕೂ ಹೆಚ್ಚು ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ. ಬಂಧಿತರಲ್ಲಿ ಎರಡು ಮುದ್ರಣಾಲಯದ ಮಾಲೀಕರೂ ಸೇರಿದ್ದಾರೆ ಎಂದು ವರದಿಯಾಗಿದೆ.

ವರದಿಯ ಪ್ರಕಾರ, ದೆಹಲಿಯ ಕೆಲವು ಭಾಗಗಳಲ್ಲಿ “ಮೋದಿ ಹಟಾವೋ ದೇಶ್ ಬಚಾವೋ” ಎಂಬ ಶೀರ್ಷಿಕೆಯೊಂದಿಗೆ ಪೋಸ್ಟರ್‌ಗಳನ್ನು ಹಾಕಲಾಗಿದೆ. ಆದರೆ, ಪೋಸ್ಟರ್‌ಗಳಲ್ಲಿ ಪ್ರಿಂಟಿಂಗ್ ಪ್ರೆಸ್‌ನ ವಿವರ ಇರಲಿಲ್ಲ. ಡಿಡಿಯು ಮಾರ್ಗದಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಧಾನ ಕಛೇರಿಯಿಂದ ಹೊರಬರುತ್ತಿದ್ದಾಗ ಐಪಿ ಎಸ್ಟೇಟ್ ಪ್ರದೇಶದಲ್ಲಿ ವ್ಯಾನ್ ಅನ್ನು ಅಡ್ಡಗಟ್ಟಿದ ಪೊಲೀಸರು ಪರಿಶೀಲನೆ ನಡೆಸಿ ವ್ಯಾನ್‌ ನಲ್ಲಿದ್ದ ಸುಮಾರು 2,000 ಪೋಸ್ಟರ್‌ಗಳನ್ನು ಮತ್ತು ವಾಹನವನ್ನೂ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

“ಬಂಧಿತರಲ್ಲಿ ಇಬ್ಬರು ಪ್ರಿಟಿಂಗ್ ಪ್ರೆಸ್ ಅನ್ನು ಹೊಂದಿದ್ದಾರೆ.  ಪ್ರಿಂಟಿಂಗ್ ಪ್ರೆಸ್ ಆಕ್ಟ್ & ಡಿಫೇಸ್ಮೆಂಟ್ ಆಫ್ ಪ್ರಾಪರ್ಟಿ ಆಕ್ಟ್ ನಡಿ ಎಫ್ಐಆರ್ ದಾಖಲಿಸಲಾಗಿದೆ”  ಎಂದು ವಿಶೇಷ ಪೊಲೀಸ್ ಕಾನ್ಸ್ ಟೇಬಲ್ ದೀಪೇಂದ್ರ ಪಾಠಕ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಈ ಕುರಿತಾಗಿ ಆಮ್ ಆದ್ಮಿ ಪಕ್ಷ (AAP) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, “ಮೋದಿ ಸರ್ಕಾರದ ಸರ್ವಾಧಿಕಾರ ಉತ್ತುಂಗದಲ್ಲಿದೆ. ಈ ಪೋಸ್ಟರ್‌ನಲ್ಲಿ ಮೋದಿಜಿ 100 ಎಫ್‌ಐಆರ್ ದಾಖಲಿಸಲು ಆಕ್ಷೇಪಾರ್ಹವಾದದ್ದು ಏನು? ಪ್ರಧಾನಿ ಮೋದಿಯವರೇ, ನಿಮಗೆ ಬಹುಶಃ ತಿಳಿದಿರಲಿಕ್ಕಿಲ್ಲ, ಭಾರತವು ಪ್ರಜಾಪ್ರಭುತ್ವ ರಾಷ್ಟ್ರ. ಒಂದು ಪೋಸ್ಟರ್ ನೋಡಿ ತುಂಬಾ ಭಯ! ಏಕೆ?” ಎಂದು ಟ್ವೀಟ್ ನಲ್ಲಿ ಪ್ರಶ್ನಿಸಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios