Monday, December 23, 2024

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ಎಲ್.ನಾರಾಯಣಸ್ವಾಮಿ ನೇಮಕ

by eesamachara
0 comment

ಬೆಂಗಳೂರು: ರಾಜ್ಯ ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಹಿಮಾಚಲ ಪ್ರದೇಶ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. (Human Rights Commission)

ಅಧ್ಯಕ್ಷರ ಜೊತೆಗೆ ನಿವೃತ್ತ  ಜಿಲ್ಲಾ ನ್ಯಾಯಾಧೀಶ ಎಸ್.ಕೆ. ವಂಟಿಗೋಡಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಟಿ. ಶ್ಯಾಂ ಭಟ್ ಅವರನ್ನು ಆಯೋಗದ ಸದಸ್ಯರನ್ನಾಗಿ ಆಯ್ಕೆ ನೇಮಿಸಲಾಗಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನವರಾದ ಎಲ್. ನಾರಾಯಣಸ್ವಾಮಿ, ಕಾನೂನು ಪದವಿ ಪೂರ್ಣಗೊಳಿಸಿ 1987ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದರು. 2007ರ ಜುಲೈ 4ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2009ರ ಏಪ್ರಿಲ್ 17ರಿಂದ ಕಾಯಂ ನ್ಯಾಯಮೂರ್ತಿಯಾಗಿದ್ದರು. 2019ರ ಆಗಸ್ಟ್‌ನಲ್ಲಿ ಹಿಮಾಚಲಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಅವರು, 2021ರ ಜುಲೈ 30ರಂದು ನಿವೃತ್ತರಾಗಿದ್ದರು.

ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು ಮತ್ತು ಸದಸ್ಯರನ್ನು ಮುಖ್ಯಮಂತ್ರಿ, ಮುಖ್ಯ ನ್ಯಾಯಮೂರ್ತಿ, ಗೃಹ ಸಚಿವರು, ಕಾನೂನು ಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರ ಮೂಲಕ ಆಯ್ಕೆ ಮಾಡಲಾಗುತ್ತೆ. ಆದರೆ ಇದುವರೆಗೂ ವಿಪಕ್ಷ ನಾಯಕ ಇಲ್ಲದ ಕಾರಣ ಅಧ್ಯಕ್ಷರು ಮತ್ತು ಸದಸ್ಯರನ್ನು ಸರ್ಕಾರ ಆಯ್ಕೆ ಮಾಡಿರಲಿಲ್ಲ. ಎಂಟು ತಿಂಗಳಾದರೂ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರನ್ನು ಆಯ್ಕೆ ಮಾಡಿಲ್ಲ ಎಂದು ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಸರ್ಕಾರಕ್ಕೆ ನೊಟೀಸ್ ನೀಡಿತ್ತು. ವಿರೋಧ ಪಕ್ಷ ನಾಯಕರ ಆಯ್ಕೆ ಆಗದ ಕಾರಣಕ್ಕೆ ಮಾನವಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರ ಆಯ್ಕೆ ತಡವಾಗಿದೆ ಎಂದು ನೊಟೀಸ್​​ಗೆ ಸರ್ಕಾರಿ ಮುಖ್ಯ ಕಾರ್ಯದರ್ಶಿ ಉತ್ತರ ನೀಡಿದ್ದರು.

ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸುಮಾರು 4,800ಕ್ಕೂ ಅಧಿಕ ಪ್ರಕರಣಗಳು ತನಿಖೆಯಾಗದೆ ಬಾಕಿ ಉಳಿದಿವೆ. ಈಗ ಅಧ್ಯಕ್ಷರು ಆಯ್ಕೆಯಾಗಿದ್ದರಿಂದ ತನಿಖೆ ಮುಂದುವರೆಯಲಿವೆ. ಮಂಗಳವಾರದಿಂದ ಬಾಕಿ ಉಳಿದಿದ್ದ ಪ್ರಕರಣಗಳ ತನಿಖೆ ಆರಂಭ ಆಗುವ ಸಾಧ್ಯತೆ ಇದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios