Monday, December 23, 2024

ಲೋಕಸಭಾ ಚುನಾವಣೆ: ಏ​.26 ರಂದು ದಕ್ಷಿಣ ಕನ್ನಡ ಜಿಲ್ಲೆ ಸೇರಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ

by eesamachara
0 comment

ಬೆಂಗಳೂರು: ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ.

ರಾಜ್ಯದಲ್ಲಿ ಏಪ್ರಿಲ್​ 26 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಮತದಾನ ನಡೆಯಲಿರುವ ಜಿಲ್ಲೆಗಳು:  ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ರಾಜ್ಯದಲ್ಲಿ  ಮೇ 7 ರಂದು 2ನೇ ಹಂತದ ಮತದಾನ ನಡೆಯಲಿದೆ. ಮತದಾನ ನಡೆಯಲಿರುವ ಜಿಲ್ಲೆಗಳು:  ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್​, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios