ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿಯನ್ನು ನಗರದ ಲಾಲ್‌ಬಾಗ್‌ನಲ್ಲಿ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಉದ್ಘಾಟಿಸಿದರು.
ಬಳಿಕ ಜನಾರ್ದನ ಪೂಜಾರಿ ಮಾತನಾಡಿ, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗ್ಯ ಅಭ್ಯರ್ಥಿಯನ್ನು ನಿಲ್ಲಿಸಿದ್ದಾರೆ. ಯುವಕನಿಗೆ ಪಕ್ಷ ಟಿಟ್ ನೀಡಿರುವುದು ಸಂತಸದ ವಿಚಾರ. ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಈ ಬಾರಿ ಗೆಲುವು ದಾಖಲಿಸುತ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಶುಭ ಹಾರೈಸಿದರು.
ಬಳಿಕ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮುಂಭಾಗದಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ವಕ್ತಾರೆ ಪ್ರತಿಭಾ ಕುಳಾಯಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮ.ನ.ಪಾ ಸದಸ್ಯರು, ಸೇವಾದಳ ಹಾಗೂ ಎನ್‌ಎಸ್‌ಯುಐ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.