ಮೈಸೂರು: “ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಇರುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಯಾವ ಕ್ಷೇತ್ರ ಬಿಟ್ಟು ಕೊಡಬೇಕು ಎಂಬುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಇಂದು ಸಂಜೆ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ವಿವರ ಬಿಡುಗಡೆ ಮಾಡಲಿದ್ದಾರೆ” ಎಂದು ಮಾಹಿತಿ ನೀಡಿದರು.
“ನರೇಂದ್ರ ಮೋದಿಯವರು 400ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ-ಚಂದ್ರ ಇರೋದುಎಷ್ಟು ಸತ್ಯವೋ ಇದು ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಲೇ ಚಿಂತೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ತಿಳಿಸಿದರು.