Monday, December 23, 2024

ವಿಧಾನಸಭೆ ಚುನಾವಣೆ: ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

by eesamachara
0 comment

ಬೆಂಗಳೂರು: ವಿಧಾನಸಭೆ ಚುನಾವಣಾ ಕಾವು ರಂಗೇರುತ್ತಿದ್ದು, ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮೇಲೆ ಕುತೂಹಲ ನೆಟ್ಟಿದೆ. ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆಯಲಿರುವ ಚುನಾವಣಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಅಂತಿಮವಾಗಿ ಚರ್ಚಿಸಿ ಮೊದಲ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ರಾಜ್ಯ ಉಸ್ತುವಾರಿ ಸುರ್ಜೆವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಹಲವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು. ಈ ನಿಟ್ಟಿನಲ್ಲಿ ಟಿಕೆಟ್ ಆಕಾಂಕ್ಷಿಗಳ ಲಾಬಿ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎನ್ನಲಾಗಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios