Friday, June 6, 2025

ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ ಅಧಿಕಾರ ಸ್ವೀಕಾರ

by eesamachara
0 comment

ಬೆಂಗಳೂರು: ವಿಧಾನಸಭೆ ನೂತನ ಸ್ವೀಕರ್ ಆಗಿ ಯು.ಟಿ. ಖಾದರ್ ಅವರು ಸರ್ವಾನುಮತದಿಂದ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನುಮೋದಿಸಿದರು. ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ವಿಧಾನಸಭೆಯಲ್ಲಿ ನೂತನ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು. ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಅಭಿನಂದನೆ ಸಲ್ಲಿಸಿದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios