ದಿಲ್ಲಿ: ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯ್ದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆ ಇಂದಿನಿಂದ ಜಾರಿಗೆ ಬಂದಿವೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಚುನಾವಣೆಯಲ್ಲಿ ರಾಜಕೀಯ ಮತ್ತು ನೈತಿಕ ಆಘಾತ ಅನುಭವಿಸಿದ ಬಳಿಕ ಮೋದಿ ಜೀ ಮತ್ತು ಬಿಜೆಪಿ ಸಂವಿಧಾನವನ್ನು ಗೌರವಿಸುವ ರೀತಿ ನಾಟಕ ಮಾಡುತ್ತಿದ್ದಾರೆ. ಸತ್ಯವೇನೆಂದರೆ, ಇಂದು ಜಾರಿಗೆ ಬರುತ್ತಿರುವ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡಿ ಒತ್ತಾಯಪೂರ್ವಕವಾಗಿ ಜಾರಿಗೆ ತಂದವುಗಳಾಗಿವೆ” ಎಂದು ಹೇಳಿದ್ದಾರೆ.
“ಸಂಸದೀಯ ವ್ಯವಸ್ಥೆಯಲ್ಲಿ ಈ ‘ಬುಲ್ಡೋಜರ್ ನ್ಯಾಯ’ ಮೇಲುಗೈ ಸಾಧಿಸಲು ‘ಇಂಡಿಯಾ’ ಬಣ ಬಿಡುವುದಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.