Saturday, April 19, 2025

fake news ಸುಳ್ಳು ಸುದ್ದಿ ತಡೆಗೆ ಸರ್ಕಾರ ಕ್ರಮ: ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಸಿದ್ಧತೆ

by eesamachara
0 comment

fake news ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ fake news , ಅವಹೇಳನಕಾರಿ ಪೋಸ್ಟ್‌ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಪ್ರಾರಂಭವಾಗುವ ವಿಧಾನಮಂಡಲದ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

fake news  ಡಾ.ಜಿ.ಪರಮೇಶ್ವರ್ ಹೇಳಿಕೆ

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ತಡೆಯಲು ಮಸೂದೆಯ ಕರಡು ಸಿದ್ಧಪಡಿಸಿದೆ. ಗೃಹ ಇಲಾಖೆ, ಐಟಿ ಇಲಾಖೆಯೊಂದಿಗೆ ಸಮನ್ವಯದೊಂದಿಗೆ ಕರಡು ಸಿದ್ಧಪಡಿಸಿದೆ ಮತ್ತು ಮುಂಬರುವ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಹೇಳಿದ್ದಾರೆ.

ಸುಳ್ಳು ಸುದ್ದಿ ತಡೆಗೆ ಸರ್ಕಾರ ಕ್ರಮ: ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಸಿದ್ಧತೆ

Source : The New Indian Express

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios