ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಮಧ್ಯೆಯೇ ಮಹಿಳೆಯೋರ್ವರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧವೇ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
10 ತಿಂಗಳ ಹಿಂದೆ ಸಂತ್ರಸ್ತೆ ಮಹಿಳೆಯು ತನ್ನ ಪತಿಯ ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಭೇಟಿಯಾಗಿದ್ದರು. ಈ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ಮಹಿಳೆಗೆ ವಾಟ್ಸಾಪ್ ಕರೆ ಮಾಡಿ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಮಹಿಳೆಗೆ ವೀಡಿಯೊ ಕಾಲ್ ಮಾಡಿ ಖಾಸಗಿ ಅಂಗಗಳನ್ನು ಪ್ರದರ್ಶನದ ಮಾಡುತ್ತಿದ್ದರು. ತಾನು ಹೇಳಿದ ಹಾಗೆ ಕೇಳಬೇಕು.ಇಲ್ಲದೇ ಹೋದರೆ ಗಂಡನ ಜೀವಕ್ಕೆ ಅಪಾಯ ತಂದೊಡ್ಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೇವರಾಜೇಗೌಡ ವಿರುದ್ಧ ಸಂತ್ರಸ್ತೆ ಮಹಿಳೆ ಗಂಭೀರ ಆರೋಪ ಮಾಡಿದ್ದರು. ಈ ಕುರಿತು ಎ.1 ರಂದು ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಜಾಮೀನಿಗಾಗಿ ದೇವರಾಜೇಗೌಡ ಕೋರ್ಟ್ ಮೊರೆ ಹೋಗಿದ್ದು, ಮೇ.15 ರಂದು ವಿಚಾರಣೆ ನಡೆಯಲಿದೆ.
ಪ್ರಜ್ವಲ್ ಅಶ್ಲೀಲ ವೀಡಿಯೊ ಬಹಿರಂಗ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ದೇವರಾಜೇಗೌಡ ಅವರ ಕೇಸ್ ಇದೀಗ ಮುನ್ನಲೆಗೆ ಬಂದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಆರೋಪದ ಕುರಿತು ಗುರುವಾರ ಖಾಸಗಿ ಸುದ್ದಿವಾಹಿನಿ ಪವರ್ ಟಿವಿ ಸಂತ್ರಸ್ತ ಮಹಿಳೆಯೊಂದಿಗೆ ಮಾತುಕತೆ ನಡೆಸಿ ಬಹಿರಂಗ ಪಡಿಸಿತ್ತು.