Monday, December 23, 2024

ಇಂದು ಪಟ್ಟಿ ಬಿಡುಗಡೆಯಾಗಲ್ಲ, 2-3 ದಿನಗಳಲ್ಲಿ ಘೋಷಣೆ: ಡಿಕೆಶಿ

by eesamachara
0 comment

ಬೆಂಗಳೂರು: ಇಂದು ಕಾಂಗ್ರೆಸ್ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿಲ್ಲ. ಇನ್ನು 2-3 ದಿನಗಳಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಮೊದಲ ಪಟ್ಟಿ ಬಿಡುಗಡೆಯಾಗಬೇಕಿತ್ತು. ಹಬ್ಬಕ್ಕಾಗಿ ಎಐಸಿಸಿ ಅಧ್ಯಕ್ಷ ಖರ್ಗೆ ಬೆಂಗಳೂರಿಗೆ ಬಂದಿದ್ದಾರೆ. ಹೀಗಾಗಿ 2-3 ದಿನದಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಆಗುತ್ತೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಯುಗಾದಿ ಹಬ್ಬದ ಶುಭಾಶಯ ಕೋರಿದ ಅವರು, ಕಳೆದ ಮೂರು ವರ್ಷಗಳಿಂದ ಜನ ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಯುಗಾದಿ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ. ಈ ರೀತಿ ನೀವೂ ಹಾರೈಸಿ. ಕಾಂಗ್ರೆಸ್ ಸರ್ಕಾರ ಜನಪರವಾಗಿದೆ. ರಾಜ್ಯದ ಜನರಿಗೆ ಹಲವು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ಬಿಜೆಪಿಯವರ ತರಹ ನಾವು ಸುಳ್ಳು ಆಶ್ವಾಸನೆ ಕೊಡಲ್ಲ. ನಾವು ಕೊಟ್ಟ ಭರವಸೆಗಳನ್ನು ಈಡೇರಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿಯೇ ತೀರುತ್ತೇವೆ ಎಂದರು.

ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಡಿ.ಕೆ.ಶಿವಕುಮಾರ್ ಅವರು ಘೋಷಣೆ ಮಾಡಿದ್ದರು. ಆದರೆ ಹಲವು ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಪಟ್ಟಿ ಬಿಡುಗಡೆಯನ್ನು ಮುಂದೂಡಿದೆ ಎನ್ನಲಾಗಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios