ಮಂಗಳೂರು: ಫೈವ್ ಸ್ಟಾರ್ ಯಂಗ್ ಬಾಯ್ಸ್ ವತಿಯಿಂದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ಏಳನೇ ತರಗತಿವರೆಗಿನ 110 ವಿದ್ಯಾರ್ಥಿಗಳಿಗೆ ಬುಧವಾರ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು.
ಈ ಸಂದರ್ಭ ಅಡ್ಡೂರು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಹ್ಮದ್ ಬಾವ ಅಂಗಡಿಮನೆ, ಖತೀಬ್ ಸದಕತ್ತುಲ್ಲಾ ಫೈಝಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ. ಇಬ್ರಾಹೀಂ, ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ್ ಶೆಟ್ಟಿ, ಉಪಾಧ್ಯಕ್ಷೆ ದಿಲ್ಸಾದ್ ಬಾನು, ಸದಸ್ಯ ಸಾಹಿಕ್ ಪಾಂಡೇಲ್, ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಧ್ಯಕ್ಷ ಹಬೀಬ್ ಕಟ್ಟಪುಣಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಮೊಹಮ್ಮದ್ ಅಲಿ ಬಂಡಸಾಲೆ, ಮಾಜಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ಬಂಡಸಾಲೆ, ಡಾ.ಸಿದ್ದೀಕ್, ಡಾ. ರಮೀನ ಬಾನು, ಅಲ್ ಬಿರ್ರ್ ಸಂಚಾಲಕ ಅಬ್ದುಲ್ ಖಾದರ್ ತೋಕೂರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಸ್ವಾಗತಿಸಿದರು. ಫೈವ್ ಸ್ಟಾರ್ ಯಂಗ್ ಬಾಯ್ಸ್ ಸದಸ್ಯ ಜಮಾಲ್ ಸಾಲೆಮನೆ ಕಾರ್ಯಕ್ರಮ ನಿರೂಪಿಸಿದರು.