Monday, December 23, 2024

ನಾಳೆ ಸಿಎಂ ಜನತಾ ದರ್ಶನ: ಗೃಹ ಕಚೇರಿ ಕೃಷ್ಣಾದಲ್ಲಿ 20 ಕೌಂಟರ್ ಗಳ ವ್ಯವಸ್ಥೆ

by eesamachara
0 comment

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ತಕ್ಷಣ ಅಥವಾ ನಿಗದಿತ ಅವಧಿಯೊಳಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸೋಮವಾರ (ನ.27) ಬೆಳಿಗ್ಗೆ 9.30ರಿಂದ  ‘ಜನತಾ ದರ್ಶನ’ ನಡೆಸಲಿದ್ದಾರೆ.

ಅಹವಾಲು ಸಲ್ಲಿಸುವವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಅಹವಾಲುಗಳನ್ನು ಸ್ವೀಕರಿಸಲು 20 ಕೌಂಟರುಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಪ್ರತ್ಯೇಕ ಕೌಂಟರ್ ಗಳನ್ನು ಮೀಸಲಿರಿಸಲಾಗಿದೆ.

ಜನರಿಂದ ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ, ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ನೀಡಲಾಗುತ್ತದೆ. ಬಳಿಕ, ಜನರ ಅಹವಾಲನ್ನು ನೇರವಾಗಿ ಆಲಿಸಲಿರುವ ಸಿದ್ದರಾಮಯ್ಯ, ಪರಿಹಾರವನ್ನು ಸೂಚಿಸುವರು.

ಎಲ್ಲ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಆಯುಕ್ತರು ಖುದ್ದು ಹಾಜರಿರುವಂತೆ ಸೂಚಿಸಲಾಗಿದೆ. ಸುಮಾರು 100 ಅಧಿಕಾರಿಗಳು ಸ್ಥಳದಲ್ಲೇ ಇದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಯತ್ನ ಮಾಡಲಿದ್ದಾರೆ. ಅಹವಾಲು ಸಲ್ಲಿಸುವವರು ತಮ್ಮ ಗುರುತಿಗಾಗಿ ಆಧಾರ್ ಸಂಖ್ಯೆ ಅಥವಾ ಪಡಿತರ ಚೀಟಿಯನ್ನು ತರುವಂತೆ ಕೋರಲಾಗಿದೆ. ಇದರಿಂದ, ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿಯನ್ನು ಪತ್ತೆಹಚ್ಚಲು ಅನುಕೂಲವಾಗಲಿದೆ. ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ಮತ್ತು ಇತರ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios