fake news ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ fake news , ಅವಹೇಳನಕಾರಿ ಪೋಸ್ಟ್‌ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಪ್ರಾರಂಭವಾಗುವ ವಿಧಾನಮಂಡಲದ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
fake news ಡಾ.ಜಿ.ಪರಮೇಶ್ವರ್ ಹೇಳಿಕೆ
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ತಡೆಯಲು ಮಸೂದೆಯ ಕರಡು ಸಿದ್ಧಪಡಿಸಿದೆ. ಗೃಹ ಇಲಾಖೆ, ಐಟಿ ಇಲಾಖೆಯೊಂದಿಗೆ ಸಮನ್ವಯದೊಂದಿಗೆ ಕರಡು ಸಿದ್ಧಪಡಿಸಿದೆ ಮತ್ತು ಮುಂಬರುವ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಹೇಳಿದ್ದಾರೆ.
ಸುಳ್ಳು ಸುದ್ದಿ ತಡೆಗೆ ಸರ್ಕಾರ ಕ್ರಮ: ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಸಿದ್ಧತೆ
Source : The New Indian Express