ಬೆಂಗಳೂರು: ಇತಿಹಾಸದಲ್ಲಿ ಮೊದಲ ಬಾರಿಗೆ ನಗರದ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ತೆರೆಕಂಡ ‘ಬೆಂಗಳೂರು ಕಂಬಳ’ದ ಆಯೋಜಕರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆಯದೆ ಕಂಬಳಕ್ಕೆ ಶುಭಾಶಯ ಕೋರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದಾಳಿ ಮಾಡಿ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಿ ದಂಡ ಸಹ ವಿಧಿಸಿದ್ದರು. ಇದೀಗ ಬಿಬಿಎಂಪಿ ವಾರ್ಡ್ ನ ಕಂದಾಯ ನಿರೀಕ್ಷಕ ನೀಡಿದ ದೂರಿನ ಮೇರೆಗೆ ಕಂಬಳ ಆಯೋಜಕರ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ. Kambala