ಮಂಗಳೂರು: ಮಂಗಳೂರು ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಗಿರೀಶ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ.
ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ ಗಿರೀಶ್ ಶೆಟ್ಟಿ ಅವರು ವಿದ್ಯಾರ್ಥಿ ದೆಸೆಯಲ್ಲೇ ಎನ್.ಎಸ್.ಯು.ಐ, ಆಲ್ ಕಾಲೇಜ್ ಸ್ಟೂಡೆಂಟ್ ಯೂನಿಯನ್ ಮೂಲಕ ರಾಜಕೀಯ ಪ್ರವೇಶಿಸಿ ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ವಾರ್ಡ್ ಉಸ್ತುವಾರಿಯಾಗಿ, ವಿಧಾನಸಭಾ ಚುನಾವಣಾ ಬ್ಲಾಕ್ ಉಸ್ತುವಾರಿಯಾಗಿ, ವಿಟ್ಲ ಮತ್ತು ಸೋಮೇಶ್ವರ ಪಟ್ಟಣ ಪಂಚಾಯತ್ ಚುನಾವಾಣ ಉಸ್ತುವಾರಿಯಾಗಿ ಸೇವೆಸಲ್ಲಿದ್ದಾರೆ. ಪ್ರಸ್ತುತ ಲೋಕಸಭಾ ಚುನಾವಣಾ ಬ್ಲಾಕ್ ಉಸ್ತುವಾರಿಯಾಗಿ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.