ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ಅಧಿಕಾರೇತರ ಸದಸ್ಯರನ್ನಾಗಿ ಕಾಂಗ್ರೆಸ್ ನ ಸತೀಶ್ ಪೆಂಗಲ್, ಚೇತನ್ ಕುಮಾರ್ ಸೇರಿದಂತೆ ಐವರನ್ನು ರಾಜ್ಯ ಸರಕಾರ ನಾಮನಿರ್ದೇಶನ ಮಾಡಿದೆ.
ಮಂಗಳೂರು ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರಾಗಿ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಸದಸ್ಯೆ ತನ್ವೀರ್ ಶಾ, ಬ್ಲಾಕ್ ಸದಸ್ಯ ಸತೀಶ್ ಎಂ.ಪೆಂಗಲ್, ಹೇಮಂತ್ ಗರೋಡಿ, ಸುರತ್ಕಲ್ ಬ್ಲಾಕ್ ವ್ಯಾಪ್ತಿಯ ಕಿಶೋರ್ ಶೆಟ್ಟಿ ಇಡ್ಯಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಾಮನಿರ್ದೇಶನ ಮಾಡಿ ಆದೇಶಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಎಂ.ಮಂಗಳಗೌರಿ ಆದೇಶದಲ್ಲಿ ತಿಳಿಸಿದ್ದಾರೆ.
ಅಬಿನಂಧನೆ: ಚೇತನ್ ಕುಮಾರ್, ಸತೀಶ್ ಪೆಂಗಲ್, ತನ್ವೀರ್ ಶಾ ಅವರಿಗೆ ಬ್ಲಾಕ್ ಅಧ್ಯಕ್ಷ ಪ್ರಕಾಶ್ ಬಿ ಸಾಲ್ಯಾನ್ ಅವರು ಬ್ಲಾಕ್ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
mangalore city corporation