ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ತಾರನಾಥ್ ಗಟ್ಟಿ ಕಾಪಿಕಾಡ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಶನಿವಾರ ಆದೇಶಿಸಿದೆ.
ಅಕಾಡೆಮಿಯ ಸದಸ್ಯರಾಗಿ ಪೃಥ್ವಿರಾಜ್, ಕುಂಬ್ರ ದುರ್ಗ ಪ್ರಸಾದ್ ರೈ, ಮೋಹನ್ ದಾಸ್ ಕೊಟ್ಟಾರಿ, ಅಕ್ಷಯ್ ಆರ್.ಶೆಟ್ಟಿ, ಶೈಲೇಶ್ ಬಿನ್ ಬೋಜ ಸುವರ್ಣ, ಕಿಶೋರ್ ಬಿನ್ ಗುಡ್ಡಪ್ಪ ಗೌಡ, ಬೂಬ ಪೂಜಾರಿ, ರೋಹಿತಾಶ್ವ ಯು. ಕಾಪಿಕಾಡ್, ನಾಗೇಶ್ ಕುಮಾರ್ ಉದ್ಯಾವರ ಹಾಗೂ ಸಂತೋಷ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ.
Karnataka Tulu Sahitya Academy