Monday, December 23, 2024

ಕಾಂಗ್ರೆಸ್‌ 2ನೇ ಪಟ್ಟಿ ಬಿಡುಗಡೆ: ದಕ್ಷಿಣ ಕನ್ನಡದಿಂದ ಪದ್ಮರಾಜ್‌ ಕಣಕ್ಕೆ

by eesamachara
0 comment

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್​ ಕರ್ನಾಟಕದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​​ ಘೋಷಿಸಿದೆ. ಇನ್ನೂ ಬಳ್ಳಾರಿ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಬಾಕಿ ಇದೆ.

ಉಳಿದಂತೆ ಅರುಣಾಚಲ ಪ್ರದೇಶ-2, ಗುಜರಾತ್-11, ಮಹಾರಾಷ್ಟ್ರ-7, ರಾಜಸ್ಥಾನ- 6, ತೆಲಂಗಾಣ- 5, ಪಶ್ಚಿಮ ಬಂಗಳಾ 8, ಪುದುಚೇರಿ-1 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಕಾಂಗ್ರೆಸ್ ಪಟ್ಟಿ ಬಿಡುಗಡೆ ಮಾಡಿದೆ.

ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ

* ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ

* ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ

* ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್‌

* ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್‌

* ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ

* ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ

* ಬೆಂಗಳೂರು ಸೆಂಟ್ರಲ್‌ ಕ್ಷೇತ್ರ-ಮನ್ಸೂರ್ ಅಲಿಖಾನ್‌

* ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್‌

* ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ

* ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ

* ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್‌

* ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ

* ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್‌

* ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ

* ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್‌ ಜಿ ನಾಯಕ್‌

* ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್‌

* ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios