Monday, December 23, 2024

ಉತ್ತರ ಕನ್ನಡ ಲೋಕಸಭಾ ಚುನಾವಣೆ: ರಮಾನಾಥ ರೈಗೆ ಹೆಚ್ಚುವರಿ ಟಾಸ್ಕ್ ನೀಡಿದ ಕೆಪಿಸಿಸಿ

by eesamachara
0 comment

ಮಂಗಳೂರು: ರಾಜ್ಯದ 2ನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ರಮಾನಾಥ ರೈ ಅವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.

ದ.ಕ.ಲೋಕಸಭಾ ಚುನಾವಣೆಯನ್ನು ಜಿಲ್ಲೆಯ ಎಲ್ಲರ ಜೊತೆ ಸೇರಿ ಅತ್ಯಂತ ಅಚ್ಚುಕಟ್ಟಾಗಿ ನಡೆಸಿರುತ್ತೀರಿ. ಮೇ.7 ರಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿದ್ದು, ತಮ್ಮ ಅಪಾರ ರಾಜಕೀಯ ಅನುಭವ ಮತ್ತು ಚುನಾವಣಾ ತಂತ್ರಗಳನ್ನು ಧಾರೆಯೆರೆದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸಿ ಪ್ರಚಾರ ಕೈಗೊಂಡು ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಗೆಲುವಿಗೆ ಶ್ರಮಿಸುವಂತೆ ರಮಾನಾಥ ರೈ ಅವರಿಗೆ ಕೆಪಿಸಿಸಿ ಅಧ್ಯಕ್ಷರು ನಿರ್ದೇಶಿಸಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಮಾಜಿ ಸಚಿವರ ಜೊತೆಗೂಡಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಮಾಜಿ ಮೇಯರಾದ ಶಶಿಧರ್ ಹೆಗ್ಡೆ, ಕೆ.ಅಶ್ರಫ್, ಕಾರ್ಪೊರೇಟರ್ ನವೀನ್ ಡಿಸೋಜ, ರಮಾನಂದ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios