Monday, December 23, 2024

ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ?: ಸಿದ್ದರಾಮಯ್ಯ ಪ್ರಶ್ನೆ

by eesamachara
0 comment

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶುಕ್ರವಾರ ಮಾಧ್ಯಮ ಹೇಳಿಕೆ ನೀಡಿರುವ ಅವರು, “ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ ಬಿಜೆಪಿ ಪಕ್ಷ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು ಸೂಚಿಸಿದ್ದೇನೆ. ವಿಪರ್ಯಾಸವೆಂದರೆ ಕೇಂದ್ರ ಸರ್ಕಾರ ಆರೋಪಿಯ ರಕ್ಷಣೆಗೆ ನಿಂತಿದೆ. ತಮಗೂ ರೇವಣ್ಣನ ಕುಟುಂಬಕ್ಕೂ ಸಂಬಂಧವಿಲ್ಲ ಎನ್ನುತ್ತಿದ್ದ ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದರು” ಎಂದು ಕಿಡಿಕಾರಿದ್ದಾರೆ.

“ಅಂತಾರಾಷ್ಟ್ರೀಯ ಪ್ರಯಾಣ ಮಾಡುವಾಗ ಎಲ್ಲರ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ. ಪ್ರಜ್ವಲ್ ರೇವಣ್ಣ ದುಬೈ ಬಿಟ್ಟು ಇನ್ನು ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ” ಎಂದು ಹೇಳಿದ್ದಾರೆ.

“ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಲೆ ನಡೆದ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ. ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಲು ಒಂದು ಸರ್ಕಾರವಾಗಿ ನಾವು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇವೆ” ಎಂದಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios