ಬೆಂಗಳೂರು: ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಫೇಲ್ ಆಗುವ ಭಯದಿಂದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿಯಲ್ಲಿ ನಡೆದಿದೆ.
ಸುರೇಶ್ ಮತ್ತು ರೂಪ ದಂಪತಿಗಳ ಪುತ್ರ ಚಂದನ್ ಗೌಡ(16) ರಿಸಲ್ಟ್ಗೆ ಭಯಬಿದ್ದು ನಾಪತ್ತೆಯಾದ ಯುವಕ ಎಂದು ಗುರುತಿಸಲಾಗಿದ್ದು, ಈತ ಮಂಡಿಗೆರೆ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿದ್ದಾನೆ.
ಚಂದನ್ ಗೌಡ ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ. ಮಗನ ಫೋಟೋ ಹಿಡಿದು ಪೋಷಕರು ಹುಡುಕಾಡುತ್ತಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.