Saturday, April 19, 2025

ನಂದಿನಿ ಹಾಲಿನ ದರ ಏರಿಕೆಗೆ ಬಿಜೆಪಿ ಆಕ್ರೋಶ

by eesamachara
0 comment

ಬೆಂಗಳೂರು: ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಅವರು, “ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ದರವನ್ನ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಅವರೇ ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನ ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್ ನಲ್ಲಿ  3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ ಈಗ ಮತ್ತೊಮ್ಮೆ 2 ರೂಪಾಯಿ ಹೆಚ್ಚಾಗಿದೆ.  ನಿಮಗೆ ಬಡವರು, ಮಾಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ” ಎಂದು ಒತ್ತಾಯಿಸಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios