Saturday, June 7, 2025

ನಾಳೆ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್‌ನಿಂದ ಐವನ್‌ ಡಿಸೋಜರಿಗೆ ಅಭಿನಂದನಾ ಕಾರ್ಯಕ್ರಮ, ಕಾರ್ಯಕರ್ತರ ಸಮ್ಮಿಲನ

by eesamachara
0 comment

ಮಂಗಳೂರು: ಕರ್ನಾಟಕ ವಿಧಾನ ಪರಿಷತ್‌ಗೆ ಎರಡನೇ ಬಾರಿಗೆ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಮತ್ತು ವಿವಿಧ ನಿಗಮಗಳಿಗೆ ನಾಮನಿರ್ದೇಶನಗೊಂಡ ಕಾಂಗ್ರೆಸ್ ಕಾರ್ಯಕರ್ತರಿಗೆ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಜು.20ರಂದು ಅಭಿನಂದನಾ ಸಮಾರಂಭ ಸಂಜೆ 4 ಗಂಟೆಗೆ ಉರ್ವಸ್ಟೋರ್‌ನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಲಿರುವರು. ಮಾಜಿ ಶಾಸಕ ಜೆ.ಆರ್. ಲೋಬೊ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ವೇಳೆ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ರಘರಾಜ್ ಕದ್ರಿ, ಕರ್ನಾಟಕ ಕೊಂಕಣಿ ಅಕಾಡೆಮಿ ಸದಸ್ಯ ಸಮರ್ಥ್ ಭಟ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಮೋಹನ್ ಕೊಪ್ಪಲ, ಮಂಗಳೂರು ಮಹಾನಗರ ಪಾಲಿಕೆಯ ನಾಮನಿರ್ದೇಶನ ಸದಸ್ಯರಾದ ಕೆ.ಚೇತನ್ ಕುಮಾರ್, ತನ್ವೀರ್ ಶಾ, ಸತೀಶ್ ಪೆಂಗಲ್, ಭೂ ನ್ಯಾಯ ಮಂಡಳಿ ಸದಸ್ಯರಾದ ನೆಲ್ಸನ್ ಮೊಂತೆರೊ ಮತ್ತು ಗಿರೀಶ್ ಶೆಟ್ಟಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷೆ ಶಾಂತಲಾ ಗಟ್ಟಿ ಮತ್ತು ಸದಸ್ಯ ಅಲಿಸ್ಟನ್ ಡಿಕುನ್ಹ, ದ.ಕ. ಜಿಲ್ಲಾ ಧರ್ಮಿಕ ಪರಿಷತ್ ಸದಸ್ಯೆ ಚಂದ್ರಕಲಾ ಡಿರಾವ್ ಹಾಗೂ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಪದ್ಮನಾಭ ಅಮೀನ್ ಅವರನ್ನು ಅಭಿನಂದಿಸಲಾಗುವುದು ಎಂದು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಕಾಶ್ ಬಿ ಸಾಲ್ಯಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios