Tuesday, January 14, 2025

ಬಿಡದಿ: CCB ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆ

by eesamachara
0 comment
ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ತಿಮ್ಮೇಗೌಡ

ಬೆಂಗಳೂರು: ಸಿಸಿಬಿಯ ಆರ್ಥಿಕ ಅಪರಾಧ ಪತ್ತೆದಳ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್ ತಿಮ್ಮೇಗೌಡ ಅವರು  ರಾಮನಗರ ಜಿಲ್ಲೆಯ ಬಿಡದಿ ಬಳಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವ ದೊರೆತ ಘಟನೆ ಸೋಮವಾರ ನಡೆದಿದೆ.

ತಿಮ್ಮೇಗೌಡ ಸುಮಾರು 20 ವರ್ಷಗಳಿಂದ ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಬೆಂಗಳೂರು, ರಾಮನಗರ ಸೇರಿದಂತೆ ಹಲವು ಕಡೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಅವರು ಒಂದು ತಿಂಗಳ ಹಿಂದಷ್ಟೇ ಸಿಸಿಬಿಗೆ ವರ್ಗಾವಣೆಗೊಂಡಿದ್ದರು ಎನ್ನಲಾಗಿದೆ.

ತಿಮ್ಮೇಗೌಡ ರಾಮನಗರ ಎಸ್‌ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಸದ್ಯ ಸ್ಥಳದಲ್ಲಿ ಯಾವುದೇ ಮರಣಪತ್ರ ದೊರೆತಿಲ್ಲ. ಲೋಕಾಯುಕ್ತದಲ್ಲಿ ತಿಮ್ಮೇಗೌಡ ಅವರ ವಿರುದ್ಧ ಇತ್ತೀಚೆಗೆ ಪ್ರಕರಣವೊಂದು ದಾಖಲಾಗಿತ್ತು. ಅತ್ತಿಬೆಲೆಯಲ್ಲಿ ಕೆಲಸ ಮಾಡುತ್ತಿದ್ದಾಗ ತಿಮ್ಮೇಗೌಡ ಅವರು ಅಮಾನತುಗೊಂಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನವು ಶಂಕೆ ವ್ಯಕ್ತವಾಗಿದೆ. ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios